Friday, April 10, 2026

TOPPER IN PUC EXAM RESULT

  


        KARNATAKA PUBLIC SCHOOL HIRIADKA  


                   🌟Congratulations🌟




ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಸರ್ಕಾರಿ ಪದವಿ ಪೂರ್ವ ಕಾಲೇಜು) ಅಪೂರ್ವ ಸಾಧನೆ ಮಾಡಿದೆ. ಈ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಸಜನಿ ಅವರು ಒಟ್ಟು 600 ಅಂಕಗಳಿಗೆ 591 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 9ನೇ ಸ್ಥಾನ ಅಲಂಕರಿಸಿದ್ದಾರೆ.


ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿಯೂ ಸಜನಿ ಅವರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಜಿಲ್ಲೆಗೆ ಹೆಮ್ಮೆ ತಂದಿದೆ. ಕೇವಲ ಅಂಕಗಳಿಕೆಯಲ್ಲಿ ಮಾತ್ರವಲ್ಲದೆ, ವಿಷಯವಾರು ಸಾಧನೆಯಲ್ಲೂ ಸಜನಿ ಅವರು ಮುಂಚೂಣಿಯಲ್ಲಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಇವರು ಅತ್ಯಂತ ಕಠಿಣವೆನ್ನಲಾಗುವ ಗಣಿತ ಹಾಗೂ ಭಾಷಾ ವಿಷಯವಾದ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ವಿದ್ಯಾರ್ಥಿನಿಯ ಈ ಮಹೋನ್ನತ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಕಠಿಣ ಪರಿಶ್ರಮ ಮತ್ತು ನಿರಂತರ ಅಧ್ಯಯನವಿದ್ದರೆ ಸರ್ಕಾರಿ ಶಾಲೆಯಲ್ಲೂ ಇಂತಹ ಉನ್ನತ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಸಜನಿ ಸಾಬೀತುಪಡಿಸಿದ್ದಾರೆ.

.


Friday, August 22, 2025

NATIONAL SPACE DAY

 






ರಾಷ್ಟ್ರೀಯ ಬಾಹ್ಯಾಕಾಶ ದಿನ ಬಗ್ಗೆ

ಆಗಸ್ಟ್ 23, 2023 ರಂದು ಭಾರತವು ಚಂದ್ರನ ಮೇಲೆ ಇಳಿದ ನಾಲ್ಕನೇ ಮತ್ತು ತನ್ನ ದಕ್ಷಿಣ ಧ್ರುವ ಪ್ರದೇಶವನ್ನು ತಲುಪಿದ ಮೊದಲ ದೇಶವಾಯಿತು. ಈ ಹೆಗ್ಗುರುತು ಸಾಧನೆಯನ್ನು ಗೌರವಿಸಲು, ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 23 ಅನ್ನು "ರಾಷ್ಟ್ರೀಯ ಬಾಹ್ಯಾಕಾಶ ದಿನ" ಎಂದು ಘೋಷಿಸಿದರು.


ಭಾರತವು ತನ್ನ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು [NSpD-2024] ಆಗಸ್ಟ್ 23, 2024 ರಂದು "ಚಂದ್ರನನ್ನು ಸ್ಪರ್ಶಿಸುವಾಗ ಜೀವಗಳನ್ನು ಸ್ಪರ್ಶಿಸುವುದು: ಭಾರತದ ಬಾಹ್ಯಾಕಾಶ ಸಾಹಸ" ಎಂಬ ಥೀಮ್‌ನೊಂದಿಗೆ ಆಚರಿಸಲಾಯಿತು. 









Wednesday, August 6, 2025

Monday, July 21, 2025

 


ಹಿರಿಯಡ್ಕ: ದಿನಾಂಕ 21-07-2025 ರಂದು ಕೆಪಿಎಸ್ ಹಿರಿಯಡ್ಕ ಇಲ್ಲಿ ಯಕ್ಷಶಿಕ್ಷಣ ವತಿಯಿಂದ ನಡೆಸಲ್ಪಡುವ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. 


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗಾನ ರಂಗದ ಉಪಾಧ್ಯಕ್ಷರಾದ ಶ್ರೀ ವಿ.ಜಿ ಹೆಗ್ಡೆ ಮಾತನಾಡಿ ಯಕ್ಷಗಾನ ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜೀವನವನ್ನು ಕಲಿಸುತ್ತದೆ. ಅದರ ಜೊತೆಯಲ್ಲಿ ಏಕಾಗ್ರತೆಯನ್ನು ಮೂಡಿಸುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಯಕ್ಷಗಾನವನ್ನು ಶೃದ್ಧೆಯಿಂದ ಕಲಿಯಬೇಕು ಅದರಿಂದ ತಮ್ಮ ಶೈಕ್ಷಣಿಕ ಫಲಿತಾಂಶ ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು . 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಯಕ್ಷಗಾನ ರಂಗದ ಸಹ ಕಾರ್ಯದರ್ಶಿ ಶ್ರೀ ನಾರಾಯಣ ಶೆಟ್ಟಿ ಮಾತನಾಡಿ ಯಕ್ಷಗಾನ ರಂಗವು ವಿದ್ಯಾ ಪೋಷಕ್ ಅಡಿಯಲ್ಲಿ ಪ್ರತಿ ವರ್ಷ ಒಂದು ಕೋಟಿಗೂ ಮೀರಿದ ವಿದ್ಯಾರ್ಥಿ ವೇತನ ವಿತರಣೆ ಮಾಡುತ್ತಿದೆ. ಅಲ್ಲದೆ ಆರ್ಥಿಕವಾಗಿ ತೀರಾ ಹಿಂದುಳಿದ ವಿದ್ಯಾರ್ಥಿಗಳ ಪೋಷಕರಿಗೆ ನೆರವಾಗಿ ಅನೇಕ ಮನೆಗಳ ನಿರ್ಮಾಣ ಮಾಡಿಕೊಟ್ಟದೆ ಎಂದರು. ಯಕ್ಷಗಾನ ಅಭ್ಯಾಸ ಮಾಡಿದ ವಿದ್ಯಾರ್ಥಿಗಳು ಜೀವನದಲ್ಲಿ ವಿನಯವಂತರಾಗಿ ಪರಸ್ಪರ ಗೌರವ ಕೊಡುವ ಗುಣ ಹೊಂದುತ್ತಾರೆ. ಆದ್ದರಿಂದ ಯುಕ್ಷಗಾನ ತರಬೇತಿಯಲ್ಲಿ ಸೇರಿರುವ ವಿದ್ಯಾರ್ಥಿಗಳು ಶೃದ್ಧೆಯಿಂದ ತರಬೇತಿಯಲ್ಲಿ ಪಾಲ್ಗೊಳ್ಳಿ ಎಂದು ಕಿವಿಮಾತು ಹೇಳಿದರು. 

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಕೆಪಿಎಸ್ ಹಿರಿಯಡ್ಕ ಇದರ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ರಾವ್ , ಯಕ್ಷಗಾನ ತರಬೇತಿಯ ಗುರುಗಳಾದ ಶ್ರೀ ಸ್ಕಂದ, ತರಬೇತಿಯ ಸಂಯೋಜಕರಾದ ಡಾ. ರವೀಂದ್ರ ಕುಮಾರ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ವಹಿಸಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಕಾಶ್ ಪ್ರಭು ಸ್ವಾಗತಿಸಿದರು. ಚಿತ್ರಕಲಾ ಶಿಕ್ಷಕರಾದ ಶ್ರೀ ಮೋಹನ್ ಕಡಬ ವಂದಿಸಿದರು. ಅಧ್ಯಾಪಕರಾದ ಶ್ರೀ ರವೀಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. 



Friday, July 4, 2025

ಶಾಲಾ ಸಂಸತ್ತು

           ಶಾಲಾ ಸಂಸತ್ತು 2025 - 26



ಹಿರಿಯಡ್ಕ: ದಿನಾಂಕ 04 - 07 - 2025 ರಂದು ಕರ್ನಾಟಕದ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿ ಶಾಲಾ ಸಂಸತ್ತಿನ ಪ್ರಮಾಣವಚನ ಕಾರ್ಯಕ್ರಮ ನೆರವೇರಿತು. ಶಾಲಾ ಉಪ ಪ್ರಾಂಶುಪಾಲ ಶ್ರೀ ಪ್ರಕಾಶ್ ಪ್ರಭು ಇವರು ಶಾಲೆಯ ಸಭಾಪತಿಗೆ ಪ್ರಮಾಣವಚನವನ್ನು ಬೋಧಿಸಿದರು. 



ವಿವಿಧ ಇಲಾಖೆಯ ಮಂತ್ರಿಗಳಿಗೆ ಶಾಲೆಯ ಸಭಾಪತಿಗಳಾದ ಕುಮಾರಿ ಭೂಮಿಕಾ ರವರು ಪ್ರಮಾಣವಚನವನ್ನು ಬೋಧಿಸಿದರು. ಹತ್ತನೇ ತರಗತಿಯ ಅಂಕಿತ್ ಶಾಲಾ ನಾಯಕನಾಗಿ 10ನೇ ತರಗತಿಯ ಅನಘ ಶಾಲಾ ನಾಯಕಿಯಾಗಿ 10ನೇ ತರಗತಿಯ ಸಮನಾ ಸಾಂಸ್ಕೃತಿಕ ಮಂತ್ರಿಯಾಗಿ 10ನೇ ತರಗತಿಯ ನಿಖಿಲ್ ವಿರೋಧ ಪಕ್ಷದ ನಾಯಕನಾಗಿ ಪ್ರಮಾಣ ವಚನ ಸ್ವೀಕರಿಸಿದರು. 



        ಶಾಲಾ ಸಂಸತ್ತಿನ ನೂತನ ಸಭಾವತಿ 

                      ಕು| ಭೂಮಿಕ







Sunday, June 29, 2025


 Home


ಕರ್ನಾಟಕಸರಕಾರ

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ

KPS HIRIADKA

2025 - 26 ನೇ ಸಾಲಿನ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳು

School Programs for the year 2025-26

              WELCOM TO  KPS HIRIYADKA 
1. ಶಾಲಾ ಪ್ರಾರಂಭೋತ್ಸವ / school Reopenin Reopening program



Thursday, June 26, 2025

ಚಿತ್ರ ಚಿತ್ತಾರ



ಚಿತ್ರಕಲಾ ಶಿಕ್ಷಕರ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ

ಡ್ರಾಯಿಂಗ್ ಗ್ರೇಡ್ ಪರೀಕ್ಷಾ ಕೈಪಿಡಿ ಬಿಡುಗಡೆ 
ನಿವೃತ್ತ ಚಿತ್ರಕಲಾ ಶಿಕ್ಷಕರಿಗೆ ಗೌರವ ಸನ್ಮಾನ ಮತ್ತು ಸಂಘದ ನೂತನ ಪದಾಕಾರಿಗಳ ಆಯ್ಕೆ ಕಾರ್ಯಕ್ರಮ


 


ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ – 2025

ಡ್ರಾಯಿಂಗ್ ಗ್ರೇಡ್ ಕೈಪಿಡಿ ಬಿಡುಗಡೆ, ನಿವೃತ್ತ ಚಿತ್ರಕಲಾ ಶಿಕ್ಷಕರಿಗೆ ಗೌರವ ಸನ್ಮಾನ,
ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ (ರಿ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕ (ಉಡುಪಿ ವಲಯ) ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ – 2025 ಎಂಬ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮವು ಈ ತಿಂಗಳ 28ನೇ ತಾರೀಖು ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಕಲಾ ಪ್ರಾತ್ಯಕ್ಷತೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಗಲಿದ್ದು, ಎಣ್ಣೆಹೊಳೆ, ಕಾರ್ಕಳದ ಆರ್.ಎನ್. ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀ ಗಣೇಶ್ ಅವರು ಕಲಾ ಪ್ರದರ್ಶನ ನೀಡಲಿದ್ದಾರೆ. ಅದಕ್ಕೂ ಮುನ್ನ, ವಿದ್ಯಾರ್ಥಿಗಳ ಕಲಾಕೃತಿಗಳ ಪ್ರದರ್ಶನವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕದ ವಿದ್ಯಾರ್ಥಿಗಳು ನಡೆಸಲಿದ್ದಾರೆ.

ಸಭಾ ಕಾರ್ಯಕ್ರಮವು 11 ಗಂಟೆಗೆ ಆರಂಭವಾಗಲಿದ್ದು, ಈ ಸಭಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಪ್ರಸಾದ್, ಐ.ಎ.ಎಸ್. ರವರು ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕದ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ವಹಿಸಲಿದ್ದಾರೆ.

ಕಾರ್ಯಕ್ರಮದ ಪ್ರಮುಖ ಅಂಗವಾಗಿ ಚಿತ್ರಕಲಾ ಶಿಕ್ಷಕರಿಗೆ ಮಾರ್ಗದರ್ಶಿಯಾಗಿ ಸಿದ್ಧಪಡಿಸಲಾದ ಡ್ರಾಯಿಂಗ್ ಗ್ರೇಡ್ ಪರೀಕ್ಷಾ ಕೈಪಿಡಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಉಡುಪಿಯ ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ಬಿಡುಗಡೆಗೊಳಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಹೃದಯಪೂರ್ವಕವಾಗಿ ಉಪಯೋಗಿಸಿಕೊಂಡು, ನಿವೃತ್ತ ಚಿತ್ರಕಲಾ ಶಿಕ್ಷಕರಿಗೆ ಗೌರವಸನ್ಮಾನವನ್ನೂ ನಡೆಸಲಾಗುತ್ತಿದೆ. ಈ ಗೌರವಸನ್ಮಾನವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಯಲ್ಲಮ್ಮ ಅವರು ನಿರ್ವಹಿಸಲಿದ್ದಾರೆ. ಚಿತ್ರಕಲಾ ಪ್ರದರ್ಶನವನ್ನು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಲೋಕೇಶ್ ಸಿ. ಅವರು ಉದ್ಘಾಟಿಸಲಿದ್ದಾರೆ.

ಶಿಕ್ಷಣ ಕ್ಷೇತ್ರದ ಹಲವು ಗಣ್ಯರ ಉಪಸ್ಥಿತಿಯೊಂದಿಗೆ ಈ ಕಾರ್ಯಕ್ರಮ ಬೆರಗುಗೊಳ್ಳಲಿದೆ. ಖ್ಯಾತ ಕೃಷಿ ಅರ್ಥಶಾಸ್ತ್ರಜ್ಞರಾದ ಡಾ. ಎನ್.ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹಾಗೂ ಡಯಟ್ ಉಪನ್ಯಾಸಕರಾದ ಶ್ರೀ ಯೋಗ ನರಸಿಂಹಸ್ವಾಮಿ ಕೆ.ಎಂ., ವಿಷಯ ಪರಿವೀಕ್ಷಕರಾದ ಶ್ರೀ ನಾಗರಾಜ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಬಿ.ಎಲ್. ವಿಶ್ವಾಸ್ ಭಟ್, ಕರ್ನಾಟಕ ಪಬ್ಲಿಕ್ ಸ್ಕೂಲಿನ ಉಪಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಮತ್ತು ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಬಿ.ಪಿ. ಸಹ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಪೂರ್ಣ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ಕಡಬ , ಸಂಘದ ಪದಾಧಿಕಾರಿಗಳು, ಎಲ್ಲಾ ಸದಸ್ಯರು ಸ್ವಾಗತವನ್ನು ಕೋರಿದ್ದಾರೆ.

SSLC TIME TABLE _ 2023

TOPPER IN PUC EXAM RESULT

           KARNATAKA PUBLIC SCHOOL HIRIADKA                      🌟Congratulations🌟 ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿ...