Job alert- find some govt. And other jobs.
Tuesday, September 21, 2021
Monday, September 13, 2021
ಸ್ಪರ್ಧಾತ್ಮಕ ಪರೀಕ್ಷೆ ಸಹಾಯಕ
ಈ ಬ್ಲಾಗ್ ನಲ್ಲಿ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರವಾದ ಸಂಪನ್ಮೂಲಗಳನ್ನು ಕೊಡಲಾಗಿದೆ
🔰IAS MY DREAM: Mental Ability | ಮಾನಸಿಕ ಸಾಮರ್ಥ್ಯ
🔰IAS MY DREAM: Indian Constitution (ಸಂವಿಧಾನ)
🔰Karnataka History | ಕರ್ನಾಟಕ ಇತಿಹಾಸ |
🔰ಸ್ಪರ್ಧಾ ಜಗತ್ತು FDA,SDA ಸಂಭವನೀಯ ಪ್ರಶ್ನೆಗಳು 2020
🔰SDA ಪರೀಕ್ಷೆಗಳಿಗೆ ಉಪಯುಕ್ತ ವಾಗುವ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)
Thursday, September 9, 2021
ಹಿಂದೂ ಹಬ್ಬಗಳು
1 . ಮಹಾಶಿವರಾತ್ರಿ
ನಾಗರ ಪಂಚಮಿ - ವಿಶೇಷ
ತಿಥಿ : ಶ್ರಾವಣ ಶುಕ್ಲ ಪಂಚಮಿ
ಇತಿಹಾಸ : ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವು ಪಂಚಮಿಯಾಗಿತ್ತು.
ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ
ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ.’ ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣ ವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ. ಸ್ಥೂಲ ದೇಹವು ಪ್ರಾಣಹೀನವಾಗಿದೆ ಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.
ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವ
೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ಕನಿಷ್ಠ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ‘ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ’ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ.
ನಾಗನ ಪೂಜೆ ಮಾಡುವುದರ ಹಿಂದಿನ ಶಾಸ್ತ್ರ
ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.
ನಾಗನ ಮಹಾತ್ಮೆ
೧. ‘ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ವಜ್ರವಿದೆ. ಅವನು ಶ್ರೀವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ. ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಶಯನ ಮಾಡುತ್ತಾನೆ. ತ್ರೇತಾಯುಗದಲ್ಲಿ ಶ್ರೀವಿಷ್ಣು ರಾಮನ ಅವತಾರವನ್ನು ತೆಗೆದುಕೊಂಡಾಗ ಶೇಷನು ಲಕ್ಷ್ಮಣನ ಅವತಾರವನ್ನು ತೆಗೆದುಕೊಂಡಿದ್ದನು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾಗಿದ್ದನು.
೨. ‘ಶ್ರೀಕೃಷ್ಣನು ಯಮುನಾ ನದಿಯ ಆಳದಲ್ಲಿದ್ದ ಕಾಲಿಯಾ ನಾಗನನ್ನು ಮರ್ದನ ಮಾಡಿದನು. ಆ ದಿನವು ಶ್ರಾವಣ ಶುಕ್ಲ ಪಂಚಮಿಯಾಗಿತ್ತು.
೩. ‘ನಾಗಗಳಲ್ಲಿನ ಶ್ರೇಷ್ಠನಾದ ‘ಅನಂತ’ನೇ ನಾನು’, ಎಂದು ಗೀತೆಯಲ್ಲಿ (೧೦.೨೯) ಶ್ರೀಕೃಷ್ಣ ತನ್ನ ವಿಭೂತಿಯನ್ನು ಹೇಳುತ್ತಾನೆ.
ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್|
ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ||
ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆಯನ್ನು ಮಾಡುತ್ತಾರೆ. ಇದರಿಂದ ಸರ್ಪಭಯವಿರುವುದಿಲ್ಲ ಮತ್ತು ವಿಷದಿಂದ ತೊಂದರೆಯಾಗುವುದಿಲ್ಲ.’
ಪೂಜೆ
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀ ಕಣಗಳು (ಚೈತನ್ಯಕಣಗಳು).
ಭಾವಾರ್ಥ: ‘ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.’
– ಪ.ಪೂ.ಪರಶರಾಮ ಪಾಂಡೇ ಮಹಾರಾಜರು, ಸನಾತನ ಆಶ್ರಮ, ದೇವದ, ಪನವೇಲ.
ನಿಷೇಧ: ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು.
ಸುಬ್ರಮಣ್ಯ ಷಷ್ಠಿಯ ಹಾರ್ದಿಕ
ಚಂಪಾ ಷಷ್ಠಿಯ ವಿಶೇಷತೆ : ಶಿವ , ಸುಬ್ರಮಣ್ಯರ ಆರಾಧಾನ ದಿನ
ಚಂಪಾ ಷಷ್ಠಿ ಇದು ಶಿವ ಹಾಗೂ ಸುಬ್ರಮಣ್ಯನನ್ನು ಪೂಜಿಸುವ ಉತ್ಸವ . ಈ ಉತ್ಸವ ಆರು ದಿನಗಳ ಕಾಲ ನಡೆಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಶಿವನು ಖಂಡೋಬ ರೂಪದಲ್ಲಿ ನೆಲೆಸಿದ್ದು ಚಂಪಾ ಷಷ್ಠಿಯಂದು ಈ ಭಾಗಗಳಲ್ಲಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯನನ್ನು ಈ ದಿನ ಆರಾಧಿಸುತ್ತಾರೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ , ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂದು ಹೇಳುತ್ತಾರೆ.
ಒಮ್ಮೆ ಇಬ್ಬರು ರಾಕ್ಷಸರು ಮಲ್ಲ ಮತ್ತು ಮಣಿ ಇವರ ಹಾವಳಿ ಸಹಿಸಲಾರದೆ ದೇವತೆಗಳು ಋಷಿಮುನಿಗಳು ಜನರು ಶಿವನ ಮೊರೆ ಹೋಗಲು ಶಿವನು ಖಂಡೋಬ ರೂಪದಲ್ಲಿ ಬಂದು ಇಬ್ಬರು ರಾಕ್ಷಸರನ್ನು ಸೋಲಿಸಿದಾಗ ಇಬ್ಬರು ಶರಣಾಗುತ್ತಾರೆ.
ಶಿವನಲ್ಲಿ ವರಕೇಳಿದ ಮಲ್ಲ ತಮ್ಮಜೊತೆ ಖಂಡೋಬ ರೂಪದಲ್ಲಿ ಇದ್ದು ಜನರಮನೋಕಾಮನೆಗಳ್ಳನ್ನು ಈಡೇರುವಂತೆ ಮಾಡಿ ಎಂದು ಕೇಳಿದಾಗ ಆಗಲಿ ಎಂದ ಶಿವನು ಖಂಡೋಬ ರೂಪದಲ್ಲಿ ನೆಲೆಸಿದರು .
ಈ ದೇವಾಲಯಗಳಲ್ಲಿ ಖಂಡೋಬ ಮೂರ್ತಿ ಜೊತೆ ಮಲ್ಲ, ಮಣಿಗಳ ಮೂರ್ತಿಗಳನ್ನು ಇಡುತ್ತಾರೆ. ಹಾಗಾಗಿ ಇಲ್ಲಿ ಈ ದಿನ ಚಂಪಾ ಷಷ್ಠಿ ವಿಜೃಂಭಣೆ ಯಿಂದ ಆಚರಿಸುತ್ತಾರೆ.
ಇತ್ತ ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯ ದೇವಾಲಯ ಗಳಲ್ಲಿ ಚಂಪಾ ಷಷ್ಠಿ ಯಂದು ವಿಶೇಷ ಪೂಜೆ ಹಾಗೂ ರಥೊತ್ಸವ ವಿಜೃಂಭಣೆಯಿಂದ ನಡೆಯುತ್ತದೆ.
ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.
ಜೊತೆಗೆ ಮಹಿಳೆಯರು ಈ ದಿನ ಉಪವಾಸ ಇರುತ್ತಾರೆ. ಮದ್ಯಾಹ್ನ ಮಡಿಯಾಗಿ ಅನ್ನ, ಸಾರು ತಯಾರಿಸಿ ಬಾಳೆ ಎಲೆ ಊಟ ಮಾಡುತ್ತಾರೆ. ನಂತರ ಎಲೆಯನ್ನು ಮರದ ಗೆಲ್ಲುಗಳ ನಡುವೆ ಸಿಕ್ಕಿಸುತ್ತಾರೆ, ಹೀಗೆ ಮಾಡಿದರೆ ಐಶ್ವರ್ಯ ವೃದ್ಧಿಯಾಗುತ್ತದೆ ಎನ್ನುವ ನಂಬಿಕೆ ಇದೆ.
ಸ್ಕಂದ ಷಷ್ಠಿ ನಂತರ ಬರುವ ಆಚರಣೆಯೇ ಸುಬ್ರಹ್ಮಣ್ಯ ಷಷ್ಠಿ. ಮಾರ್ಗಶಿರ ಮಾಸದಲ್ಲಿ ಬರುವ ಈ ಷಷ್ಠಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಎಂದೂ ಪ್ರಸಿದ್ಧಿಯನ್ನು ಪಡೆದಿದೆ. ಶುಕ್ಲಪಕ್ಷದ ಆರನೇ ದಿನ ಅಂದರೆ ಡಿಸೆಂಬರ್ 2ರಂದು ಆಚರಿಸಲ್ಪಡುವ ಷಷ್ಠಿ ಹಿಂದೂಗಳ ಪ್ರಮುಖ ಹಬ್ಬ. ತುಳುನಾಡಿಗೆ ಇದು ಪ್ರಮುಖ ಹಬ್ಬವೂ ಹೌದು.
ಸುಬ್ರಮಣ್ಯ ಷಷ್ಠಿಯ ಹಾರ್ದಿಕ
ಸ್ಕಂದ ಷಷ್ಠಿ ನಂತರ ಬರುವ ಆಚರಣೆಯೇ ಸುಬ್ರಹ್ಮಣ್ಯ ಷಷ್ಠಿ. ಮಾರ್ಗಶಿರ ಮಾಸದಲ್ಲಿ ಬರುವ ಈ ಷಷ್ಠಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಎಂದೂ ಪ್ರಸಿದ್ಧಿಯನ್ನು ಪಡೆದಿದೆ. ಶುಕ್ಲಪಕ್ಷದ ಆರನೇ ದಿನ ಅಂದರೆ ಡಿಸೆಂಬರ್ 2ರಂದು ಆಚರಿಸಲ್ಪಡುವ ಷಷ್ಠಿ ಹಿಂದೂಗಳ ಪ್ರಮುಖ ಹಬ್ಬ. ತುಳುನಾಡಿಗೆ ಇದು ಪ್ರಮುಖ ಹಬ್ಬವೂ ಹೌದು
ಋಷಿ ಕಶ್ಯಪ ಮಹಾಮುನಿಗೆ ಹದಿಮೂರು ಜನ ಪತ್ನಿಯರು. ಇವರೆಲ್ಲ ದಕ್ಷನ ಮಕ್ಕಳು ಅಂದರೆ ಅಕ್ಕ ತಂಗಿಯರು. ಅದರಲ್ಲಿ ಕದ್ರು ಮತ್ತು ವಿನುತಾ ಕೂಡಾ ಇಬ್ಬರು. ಒಂದು ದಿನ ಕದ್ರು ತನ್ನ ಸಹೋದರಿ ವಿನುತಾಳೊಂದಿಗೆ ಮೋಸದ ಪಂಥ ಕಟ್ಟಿ ತನ್ನ ಚರಣದಾಸಿಯನ್ನಾಗಿ ಮಾಡಿಕೊಳ್ಳುತ್ತಾಳೆ. ಇದಕ್ಕೆ ತನ್ನ ಮಕ್ಕಳಾದ ಸರ್ಪಗಳ ಸಹಾಯವನ್ನು ಪಡೆಯುತ್ತಾಳೆ. ಅವರು ಒಪ್ಪದಾಗ ಅವರಿಂದ ವಚನವನ್ನು ಪಡೆದು ಗಳಿಸಿಕೊಳ್ಳುತ್ತಾಳೆ. ಇದು ವಿನುತಾಳ ಮಗನಾದ ಗರುಡನಿಗೆ ತಿಳಿದು ಹೋಗುತ್ತದೆ. ಆದರೆ ಕದ್ರು ತನ್ನ ತಾಯಿಗೆ ಸಮಾನಳಾಗಿದ್ದುದರಿಂದ ಅವಳಿಗೆ ಏನೂ ಮಾಡಲಾಗದೆ ದ್ವೇಷ ಸರ್ಪಗಳ ಮೇಲೆ ತಿರುಗುತ್ತದೆ. ದ್ವೇಷದಿಂದ ಸಹಸ್ರ ಸಹಸ್ರ ಹಾವುಗಳನ್ನು ಕುಕ್ಕಿ ಮುಕ್ಕ ತೊಡಗುತ್ತಾನೆ.
ಗರುಡನಿಂದಾಗಿ ಪ್ರಾಣ ಭಯದಿಂದ ಶೇಷ ಪಾತಳವನ್ನು ಸೇರಿಕೊಳ್ಳುತ್ತಾನೆ. ಅನಂತನು ವೈಕುಂಠದಲ್ಲಿ ಹರಿಗೆ ತಲ್ಪವಾಗುತ್ತಾನೆ. ನಾಗಗಳು ಶಿವನ ಕೊರಳು ಕೈ ಕಾಲುಗಳನ್ನು ಸುತ್ತಿಕೊಳ್ಳುತ್ತವೆ. ಕಾಳಿಯ ಅನ್ನುವ ಹಾವು ನಂದ ಗೋಕುಲದ ಯಮುನೆಯಲ್ಲಿ ಅಡಗಿಕೊಳ್ಳುತ್ತದೆ. ಹಾಗೆಯ ಶಂಕಪಾಲ, ಭೂಧರ, ಅನಘಾದಿ ಸರ್ಪಗಳು ಒಂದೊಂದು ಕಡೆಯಲ್ಲಿ ಅಡಗಿಕೊಳ್ಳುತ್ತವೆ.ವಾಸುಕಿ ಅನ್ನುವ ಮಹಾಸರ್ಪವೊಂದು ಗರುಡ ಭಯದಿಂದ ತುಳುನಾಡಿಗೆ ಓಡಿಬರುತ್ತದೆ.
ತುಳುನಾಡಿನ ತಪ್ಪಲಿನ ಸಹ್ಯಾದ್ರಿ ಮಡಿಲಿನ, ಧಾರಾ ನದಿಯ ಪಕ್ಕದಲ್ಲಿ ಇರುವ ಬಿಲದ್ವಾರ ಅನ್ನುವ ಗುಹೆಯಲ್ಲಿ ಅಡಗಿಕೊಳ್ಳುತ್ತದೆ. ಇದು ಹೇಗೋ ಗರುಡನಿಗೆ ತಿಳಿದು ಹೋಗುತ್ತದೆ. ಘನಘೋರ ಯುದ್ಧವಾಗುತ್ತದೆ. ವಿಷಯ ತಿಳಿದ ಇವರೀರ್ವರ ಅಪ್ಪನಾದ ಕಶ್ಯಪ ಓಡೋಡಿ ಬಂದು ಯುದ್ಧವನ್ನು ತಡೆಯುತ್ತಾನೆ.ಮಹಾ ಶಿವ ಭಕ್ತನಾದ ವಾಸುಕಿಯಿಂದ ಹಲವು ಲೋಕ ಕಲ್ಯಾಣ ಕೆಲಸವೂ ನಡೆಯಬೇಕಿರುವುದನ್ನು ಗರುಡನಿಗೆ ಹೇಳುತ್ತಾನೆ. ಗರುಡ ತನ್ನ ಹಸಿವನ್ನು ಇಂಗಿಸುವಂತೆ ಕೇಳಿಕೊಂಡಾಗ ಮನಿಲಾ ದ್ವೀಪದಲ್ಲಿ ದುಷ್ಟ ಬೇಡರು ಮತ್ತು ಹಾವುಗಳನ್ನು ತಿಂದು ಹಸಿವನ್ನು ಇಂಗಿಸಿಕೊಳ್ಳುವಂತೆ ಹೇಳುತ್ತಾನೆ.
ವಾಸುಕಿಯು ತನ್ನ ಪ್ರಾಣ ಭಯವನ್ನು ಹೋಗಲಾಡಿಸಲು ಅಪ್ಪನನ್ನು ಮೊರೆಯಿಡುತ್ತಾನೆ. ಅಪ್ಪ ಶಿವನನ್ನು ಕುರಿತು ತಪಸ್ಸನ್ನು ಆಚರಿಸಲು ಹೇಳುತ್ತಾನೆ. ವಾಸುಕಿಯು ತಪಸ್ಸಿನ ಮೂಲಕ ಶಿವನನ್ನು ಒಲಿಸಿಕೊಂಡು ತನ್ನ ಪ್ರಾಣ ಭಯವನ್ನು ಹೋಗಲಾಡಿಸಲು ಹೇಳುತ್ತಾನೆ. ಅದಕ್ಕೆ ಶಿವನು " ವಾಸುಕಿ ಚಿಂತಿಸಬೇಡ ಮುಂದಿನ ಕಲ್ಪದಲ್ಲಿ ಸರ್ಪ ಕುಲದ ರಕ್ಷಣೆಗಾಗಿ ಸುಬ್ರಮಣ್ಯ ಸ್ವಾಮಿಯ ನನ್ನ ಮಗನಾಗಿ ಜನಿಸುತ್ತಾನೆ. ಆ ದಿನವು ಬೇಗ ಸನ್ನಿಹಿತವಾಗುವಂತೆ ಇಲ್ಲೇ ಇದ್ದುಕೊಂಡು ತಪಸ್ಸನ್ನು ಆಚರಿಸು' ಎಂದು ಹೇಳುತ್ತಾನೆ
.
ಹೀಗೆ ಹಲವು ವರ್ಷಗಳು ಕಳೆಯಲು ಸುಬ್ರಮಣ್ಯ ಸ್ವಾಮಿಯು ತಾರಕಾಸುರನನ್ನು ಕೊಂದು ತನ್ನ ರಕ್ತ ಸಿಕ್ತ ಆಯುಧವನ್ನು ಧಾರಾ ನದಿಗೆ ಬಂದು ತೊಳೆಯುತ್ತಾನೆ. ಅಂದಿನಿಂದ ಆ ನದಿಯು ಕುಮಾರಧಾರ ಅನ್ನುವ ಹೊಸ ನಾಮಧೇಯದಿಂದ ಕರೆಯಲ್ಪಡುತ್ತದೆ
ಇಂದ್ರ ತನ್ನ ಮಗಳಾದ ದೇವಸೇನೆಯೊಂದಿಗೆ ಓಡೋಡಿ ಬಂದು ವಿವಾಹವಾಗುವಂತೆ ಪ್ರಾರ್ಥಿಸಿಕೊಳ್ಳುತಾನೆ. ಷನ್ಮುಖನ ಒಪ್ಪಿಗೆಯನ್ನು ಪಡೆದು ಸಕಲ ದೇವರುಗಳ ಮುಂದೆ ಕುಮಾರಧಾರ ತಟದಲ್ಲಿ ಚಂಪಾ ಷಷ್ಟಿಯ ದಿನದ ಸುಘಳಿಗೆಯಲ್ಲಿ ಮದುವೆ ನಡೆಯುತ್ತದೆ . ಮುಂದೆ ವಾಸುಕಿಯ ಇಚ್ಚೆಯಂತೆ ತನ್ನ ಪತ್ನಿಯಾದ ದೇವಸೇನೆ ಮತ್ತು ವಾಸುಕಿಯ ಜೊತೆಯಲ್ಲಿ ಕುಕ್ಕೆಯಲ್ಲಿ ನೆಲೆಸಲು ಸುಬ್ರಹ್ಮಣ್ಯನು ಇಚ್ಛಿಸಿದಾಗ, ವಿಶ್ವಕರ್ಮ ಮೂರ್ತಿಯನ್ನು ಮಾಡಿಕೊಡುತ್ತಾನೆ. ಬ್ರಹ್ಮ ಅದನ್ನು ಎಲ್ಲ ದೇವರ ಸಮ್ಮುಖದಲ್ಲಿ ಪ್ರತಿಷ್ಠಾಪಿಸುತ್ತಾನೆ.
ಸುಬ್ರಮಣ್ಯ ದೇವರನ್ನು ಧರೆಗೆ ಇಳಿಸಿದ ವಾಸುಕಿಯನ್ನು ತುಳುನಾಡಿನ ಮನೆ ಮನೆಗಳಲ್ಲಿ ನಾಗಬ್ರಹ್ಮ ಅನ್ನುವ ನಾಮಧೇಯದಿಂದ ಪೂಜಿಸಲಿ ಎಂದು ಸಕಲ ದೇವರುಗಳು ವಾಸುಕಿಯನ್ನು ಹರಸುತ್ತಾರೆ. ಹಾಗಾಗಿ ಸುಬ್ರಮಣ್ಯ ನೆಲೆಸಲು ಕಾರಣನಾದ ಗರುಡ ಬರದೆ ಕೆಲವು ಕಡೆ ಚಂಪಾ ಷಷ್ಟಿಯ ರಥವನ್ನು ಎಳೆಯುವ ಕ್ರಮ ಇಲ್ಲ. ಇದೊಂದು ಸಂಪ್ರದಾಯವಾಗಿ, ಹಬ್ಬವಾಗಿ ಇಂದಿಗೂ ವೈಭವದಿಂದ ಆಚರಿಸಲ್ಪಡುತ್ತದೆ.
ಕೃಪೆ : vijayakarnataka.com
ಸಂಗ್ರಹ : ಪ್ರೊ ರವೀಂದ್ರ ಕುಮಾರ್ (ಆರ್.ಕೆ)
====≠======≠========≠=========≠======
👆click
ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು............
ಚಿತ್ರದ ಮೇಲೆ ಒತ್ತಿ ಹಾಗೂ ಓದಿರಿ
.
ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು🙏🌹🙏
Saturday, September 4, 2021
ರಾಷ್ಟ್ರೀಯ ಹಬ್ಬಗಳು
ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 05
ಡಾ| ರಾಧಾಕೃಷ್ಣನ್ ಜನ್ಮ ದಿನಾಚರಣೆ
➥ ಡಾ| ಸರ್ವೆಪಲ್ಲಿ ರಾಧಾಕೃಷ್ಣನ್ ಕುರಿತು
ದಿನಾಂಕ- 05-09-2022 ರಂದು ಸೋಮವಾರ ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ , ಬೆಂಗಳೂರು, ಇಲ್ಲಿ ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಡಿ.ಎಸ್.ಇ.ಆರ್.ಟಿ. ಜ್ಞಾನದೀಪ ಮತ್ತು ಮಕ್ಕಳ ವಾಣಿ ಯೂಟ್ಯೂಬ್ ಚಾನೆಲ್ ಗಳ ಮೂಲಕ ನೇರಪ್ರಸಾರ ಮಾಡಲಾಗುವುದು. ಕಾರ್ಯಕ್ರಮದ ಲಿಂಕ್ ಅನ್ನು ಜಿಲ್ಲೆಯ ಎಲ್ಲಾ ಶಿಕ್ಷಕರ ಗುಂಪುಗಳಲ್ಲಿ ಹಂಚಿಕೊಂಡು ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಿಕೊಡುವುದು.👇🏻👇🏻
https://youtu.be/tvu6rBVPQk8
https://youtu.be/8bBQ6ufsz4s
https://youtu.be/tvu6rBVPQk8
SSLC TIME TABLE _ 2023
TOPPER IN PUC EXAM RESULT
KARNATAKA PUBLIC SCHOOL HIRIADKA 🌟Congratulations🌟 ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿ...
-
Home ಕರ್ನಾಟಕ ಸರಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ KPS HIRIADKA 2025 - 26 ನೇ ಸಾಲಿನ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳು S chool Programs for the year...
-
ವಿಶ್ವ ಪರಿಸರ ದಿನ ಜಿಲ್ಲಾ ಮಟ್ಟದ ಕಾರ್ಯಕ್ರಮ ದಿನಾಂಕ 05 - 06 - 2025 ರಂದು ವಿಶ್ವ ಪರಿಸರ ದಿನಾಚರಣೆ 2025 ಜಿಲ್ಲಾ ಪಂಚಾಯತ...
-
ದಾರಿ ದೀಪೋಕ್ತಿ ಜೀವನ ಏಳು ಬೀಳುಗಳ ಸಂಗಮ. ಸ್ನೇಹಿತರು , ಸಂಬಂಧಿಕರು, ಹಿರಿಯರು ನಮಗೆ ಮಾರ್ಗದರ್ಶಕರು. ಜೀವನ ಸುಗುಮ ದಾರಿಗೆ ಕೈಗನ್ನಡಿ ಈ.ದಾರಿ ದೀಪೋ...
Labels
- 10th hindi grammar (1)
- 10th notes (2)
- About me (1)
- Akshayamrutha (1)
- Doordarshan E_class (3)
- Doordarshan E_classes 8th (5)
- doordarshan E_classes 9th (6)
- doordarshna E_class 10th (13)
- General knowldge (1)
- Hindu festivals (1)
- jeeva sanjeevini (1)
- Karnataka public school hiriadka (1)
- Krushi (1)
- Mathematics (1)
- PUC NOTES (2)
- SA 1question papers (2)
- some important apps (1)
- ಕಥಾ ಮಾಲಿಕೆ (1)
- ಕರುಣಾಳು ಬಾ ಬೆಳಕೆ (1)









