Thursday, September 9, 2021

ಹಿಂದೂ ಹಬ್ಬಗಳು

 

1 . ಮಹಾಶಿವರಾತ್ರಿ

 ನಾಗರ ಪಂಚಮಿ - ವಿಶೇಷ




ತಿಥಿ : ಶ್ರಾವಣ ಶುಕ್ಲ ಪಂಚಮಿ


ಇತಿಹಾಸ : ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವು ಪಂಚಮಿಯಾಗಿತ್ತು.


ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ


ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ.’ ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣ ವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ. ಸ್ಥೂಲ ದೇಹವು ಪ್ರಾಣಹೀನವಾಗಿದೆ ಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.




ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವ


೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ಕನಿಷ್ಠ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ‘ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ’ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ.


ನಾಗನ ಪೂಜೆ ಮಾಡುವುದರ ಹಿಂದಿನ ಶಾಸ್ತ್ರ


ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.


ನಾಗನ ಮಹಾತ್ಮೆ


೧. ‘ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ವಜ್ರವಿದೆ. ಅವನು ಶ್ರೀವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ. ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಶಯನ ಮಾಡುತ್ತಾನೆ. ತ್ರೇತಾಯುಗದಲ್ಲಿ ಶ್ರೀವಿಷ್ಣು ರಾಮನ ಅವತಾರವನ್ನು ತೆಗೆದುಕೊಂಡಾಗ ಶೇಷನು ಲಕ್ಷ್ಮಣನ ಅವತಾರವನ್ನು ತೆಗೆದುಕೊಂಡಿದ್ದನು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾಗಿದ್ದನು.


೨. ‘ಶ್ರೀಕೃಷ್ಣನು ಯಮುನಾ ನದಿಯ ಆಳದಲ್ಲಿದ್ದ ಕಾಲಿಯಾ ನಾಗನನ್ನು ಮರ್ದನ ಮಾಡಿದನು. ಆ ದಿನವು ಶ್ರಾವಣ ಶುಕ್ಲ ಪಂಚಮಿಯಾಗಿತ್ತು.


೩. ‘ನಾಗಗಳಲ್ಲಿನ ಶ್ರೇಷ್ಠನಾದ ‘ಅನಂತ’ನೇ ನಾನು’, ಎಂದು ಗೀತೆಯಲ್ಲಿ (೧೦.೨೯) ಶ್ರೀಕೃಷ್ಣ ತನ್ನ ವಿಭೂತಿಯನ್ನು ಹೇಳುತ್ತಾನೆ.


ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್|

ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ||


ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆಯನ್ನು ಮಾಡುತ್ತಾರೆ. ಇದರಿಂದ ಸರ್ಪಭಯವಿರುವುದಿಲ್ಲ ಮತ್ತು ವಿಷದಿಂದ ತೊಂದರೆಯಾಗುವುದಿಲ್ಲ.’


ಪೂಜೆ


ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀ ಕಣಗಳು (ಚೈತನ್ಯಕಣಗಳು).


ಭಾವಾರ್ಥ: ‘ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ‘ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ’, ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ.’

– ಪ.ಪೂ.ಪರಶರಾಮ ಪಾಂಡೇ ಮಹಾರಾಜರು, ಸನಾತನ ಆಶ್ರಮ, ದೇವದ, ಪನವೇಲ.


ನಿಷೇಧ: ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು.







ಸುಬ್ರಮಣ್ಯ ಷಷ್ಠಿಯ ಹಾರ್ದಿಕ ಶುಭಾಶಯಗಳು



ಚಂಪಾ ಷಷ್ಠಿಯ ವಿಶೇಷತೆ : ಶಿವ , ಸುಬ್ರಮಣ್ಯರ ಆರಾಧಾನ ದಿನ

ಚಂಪಾ ಷಷ್ಠಿ ಇದು ಶಿವ ಹಾಗೂ ಸುಬ್ರಮಣ್ಯನನ್ನು ಪೂಜಿಸುವ ಉತ್ಸವ . ಈ ಉತ್ಸವ ಆರು ದಿನಗಳ ಕಾಲ ನಡೆಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಶಿವನು ಖಂಡೋಬ ರೂಪದಲ್ಲಿ ನೆಲೆಸಿದ್ದು ಚಂಪಾ ಷಷ್ಠಿಯಂದು ಈ ಭಾಗಗಳಲ್ಲಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯನನ್ನು ಈ ದಿನ ಆರಾಧಿಸುತ್ತಾರೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ , ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂದು ಹೇಳುತ್ತಾರೆ. 

ಒಮ್ಮೆ ಇಬ್ಬರು ರಾಕ್ಷಸರು ಮಲ್ಲ ಮತ್ತು ಮಣಿ ಇವರ ಹಾವಳಿ ಸಹಿಸಲಾರದೆ ದೇವತೆಗಳು ಋಷಿಮುನಿಗಳು ಜನರು ಶಿವನ ಮೊರೆ ಹೋಗಲು ಶಿವನು ಖಂಡೋಬ ರೂಪದಲ್ಲಿ ಬಂದು ಇಬ್ಬರು ರಾಕ್ಷಸರನ್ನು ಸೋಲಿಸಿದಾಗ ಇಬ್ಬರು ಶರಣಾಗುತ್ತಾರೆ.






ಶಿವನಲ್ಲಿ ವರಕೇಳಿದ ಮಲ್ಲ ತಮ್ಮಜೊತೆ ಖಂಡೋಬ ರೂಪದಲ್ಲಿ ಇದ್ದು ಜನರಮನೋಕಾಮನೆಗಳ್ಳನ್ನು ಈಡೇರುವಂತೆ ಮಾಡಿ ಎಂದು ಕೇಳಿದಾಗ ಆಗಲಿ ಎಂದ ಶಿವನು ಖಂಡೋಬ ರೂಪದಲ್ಲಿ ನೆಲೆಸಿದರು .





ಈ ದೇವಾಲಯಗಳಲ್ಲಿ ಖಂಡೋಬ ಮೂರ್ತಿ ಜೊತೆ ಮಲ್ಲ, ಮಣಿಗಳ ಮೂರ್ತಿಗಳನ್ನು ಇಡುತ್ತಾರೆ. ಹಾಗಾಗಿ ಇಲ್ಲಿ ಈ ದಿನ ಚಂಪಾ ಷಷ್ಠಿ ವಿಜೃಂಭಣೆ ಯಿಂದ ಆಚರಿಸುತ್ತಾರೆ.


ಇತ್ತ ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯ ದೇವಾಲಯ ಗಳಲ್ಲಿ ಚಂಪಾ ಷಷ್ಠಿ ಯಂದು ವಿಶೇಷ ಪೂಜೆ ಹಾಗೂ ರಥೊತ್ಸವ ವಿಜೃಂಭಣೆಯಿಂದ ನಡೆಯುತ್ತದೆ.





ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.





ಜೊತೆಗೆ ಮಹಿಳೆಯರು ಈ ದಿನ ಉಪವಾಸ ಇರುತ್ತಾರೆ. ಮದ್ಯಾಹ್ನ ಮಡಿಯಾಗಿ ಅನ್ನ, ಸಾರು ತಯಾರಿಸಿ ಬಾಳೆ ಎಲೆ ಊಟ ಮಾಡುತ್ತಾರೆ. ನಂತರ ಎಲೆಯನ್ನು ಮರದ ಗೆಲ್ಲುಗಳ ನಡುವೆ ಸಿಕ್ಕಿಸುತ್ತಾರೆ, ಹೀಗೆ ಮಾಡಿದರೆ ಐಶ್ವರ್ಯ ವೃದ್ಧಿಯಾಗುತ್ತದೆ ಎನ್ನುವ ನಂಬಿಕೆ ಇದೆ.


👆click


ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು............

ಚಿತ್ರದ ಮೇಲೆ ಒತ್ತಿ ಹಾಗೂ ಓದಿರಿ

.


ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು🙏🌹🙏




 
 ।।  
         

                 ಓಂ ಗಂ ಗಣಪತಯೇ ನಮಃ                                                                                                        
।।



No comments:

Post a Comment

SSLC TIME TABLE _ 2023

TOPPER IN PUC EXAM RESULT

           KARNATAKA PUBLIC SCHOOL HIRIADKA                      🌟Congratulations🌟 ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿ...