Pages

Thursday, November 14, 2024

 ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ

ಅಂತರಾಷ್ಟ್ರೀಯ ವಿಜ್ಞಾನ ದಿನಾಚರಣೆ 2025

ಫೆಬ್ರವರಿ 28 : ದಿನಾಂಕ 28-02 -2025 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿ ಅಂತರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಎಸ್ ಆರ್. ಆಂಗ್ಲ ಮಾಧ್ಯಮ ಶಾಲೆ ಹೆಬ್ರಿ ಇಲ್ಲಿಯ ರಸಾಯನಶಾಸ್ತ್ರದ ಮುಖ್ಯಸ್ಥರಾದ ಶ್ರೀ  ಹರಿಪ್ರಸಾದ್  ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸರ್ ಸಿ ವಿ ರಾಮನ್ ರಂತಹ ಮಹಾನ್ ವಿಜ್ಞಾನಿಗಳ ಕೊಡುಗೆ ಅಪಾರ. ಅವರ ಪ್ರೇರಣೆ ವಿದ್ಯಾರ್ಥಿಗಳಿಗೆ ಹೊಸ ಆವಿಷ್ಕಾರ ಮಾಡುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು. 

ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ಎಸ್. ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀ ಬಿ ಎಲ್ ವಿಶ್ವಾಸ್ ಉಪನ್ಯಾಸಕಿ ಶ್ರೀಮತಿ ವೀಣಾ , ಉಪ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಎಸ್.ಡಿ.ಎಂ ಸಿ ಸದಸ್ಯರಾದ ಶ್ರೀ ವಿಜಯ್ ವಿಜ್ಞಾನ ಮಾದರಿಗಳ ತಯಾರಿಕೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾದ  ಶ್ರೀ ಆನಂದ್ ಹಾಗೂ ಸಂಸ್ಥೆಯ ಅಧ್ಯಾಪಕ ವೃಂದದವರು  ಉಪಸ್ಥಿತರಿದ್ದರು.  ಉಪ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಸ್ವಾಗತಿಸಿದರು. ಅಧ್ಯಾಪಕರಾದ ಶ್ರೀ ರವೀಂದ್ರ ಕುಮಾರ್ ವಂದಿಸಿದರು. ವಿಜ್ಞಾನ ಶಿಕ್ಷಕ ಶ್ರೀ ರಾಜೀವ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನದ ವಿವಿಧ ಮಾದರಿ ಪ್ರದರ್ಶನ ನಡೆಯಿತು. 














      ಮಕ್ಕಳ ದಿನಾಚರಣೆ - 2024 25




























ದಿನಾಂಕ 14 ನವಂಬರ್ 2020 ನಾಕರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿ 202425 ನೇ ಸಾಲಿನ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಟನೇ ತರಗತಿಯ ಸುಮಿತ್ ರವರ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶಾಲಾ ಉಪಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು, ಶಾಲಾ ನಾಯಕ ಯಶವಂತ,  ಶಾಲಾ ನಾಯಕಿ ನಿವೇದಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

10ನೇ ತರಗತಿಯ ಅನನ್ಯ ಸ್ವಾಗತಿಸಿದರು. ಹತ್ತನೇ ತರಗತಿಯ ಪ್ರಣತಿ ವಂದನಾರ್ಪಣೆಗೈದರು. 10ನೇ ತರಗತಿಯ ಆಶಿತಾ  ಕಾಮತ್  ಕಾರ್ಯಕ್ರಮದ ನಿರೂಪಣೆ ಮಾಡಿದರು. 


No comments:

Post a Comment