Friday, February 28, 2025

 ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ

ಅಂತರಾಷ್ಟ್ರೀಯ ವಿಜ್ಞಾನ ದಿನಾಚರಣೆ 2025



ಫೆಬ್ರವರಿ 28 : ದಿನಾಂಕ 28-02 -2025 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿ ಅಂತರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಎಸ್ ಆರ್. ಆಂಗ್ಲ ಮಾಧ್ಯಮ ಶಾಲೆ ಹೆಬ್ರಿ ಇಲ್ಲಿಯ ರಸಾಯನಶಾಸ್ತ್ರದ ಮುಖ್ಯಸ್ಥರಾದ ಶ್ರೀ ಹರಿಪ್ರಸಾದ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸರ್ ಸಿ ವಿ ರಾಮನ್ ರಂತಹ ಮಹಾನ್ ವಿಜ್ಞಾನಿಗಳ ಕೊಡುಗೆ ಅಪಾರ. ಅವರ ಪ್ರೇರಣೆ ವಿದ್ಯಾರ್ಥಿಗಳಿಗೆ ಹೊಸ ಆವಿಷ್ಕಾರ ಮಾಡುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು. 


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ಎಸ್. ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀ ಬಿ ಎಲ್ ವಿಶ್ವಾಸ್ ಉಪನ್ಯಾಸಕಿ ಶ್ರೀಮತಿ ವೀಣಾ , ಉಪ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಎಸ್.ಡಿ.ಎಂ ಸಿ ಸದಸ್ಯರಾದ ಶ್ರೀ ವಿಜಯ್ ವಿಜ್ಞಾನ ಮಾದರಿಗಳ ತಯಾರಿಕೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾದ ಶ್ರೀ ಆನಂದ್ ಹಾಗೂ ಸಂಸ್ಥೆಯ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಸ್ವಾಗತಿಸಿದರು. ಅಧ್ಯಾಪಕರಾದ ಶ್ರೀ ರವೀಂದ್ರ ಕುಮಾರ್ ವಂದಿಸಿದರು. ವಿಜ್ಞಾನ ಶಿಕ್ಷಕ ಶ್ರೀ ರಾಜೀವ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಅಂತರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.


ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನದ ವಿವಿಧ ಮಾದರಿ ಪ್ರದರ್ಶನ ನಡೆಯಿತು. 











No comments:

Post a Comment

SSLC TIME TABLE _ 2023

TOPPER IN PUC EXAM RESULT

           KARNATAKA PUBLIC SCHOOL HIRIADKA                      🌟Congratulations🌟 ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿ...