Thursday, June 5, 2025

ವಿಶ್ವ ಪರಿಸರ ದಿನಾಚರಣೆ

                           






      ವಿಶ್ವ ಪರಿಸರ ದಿನ ಜಿಲ್ಲಾ ಮಟ್ಟದ ಕಾರ್ಯಕ್ರಮ


ದಿನಾಂಕ 05 - 06 - 2025 ರಂದು ವಿಶ್ವ ಪರಿಸರ ದಿನಾಚರಣೆ 2025 ಜಿಲ್ಲಾ ಪಂಚಾಯತ್ ಉಡುಪಿ , ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಜಿಲ್ಲಾ  ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು..


ಇದಕ್ಕೆ ಮೊದಲು ಎಂ.ಜೆ.ಸಿ ಕಾಲೇಜಿನ ಆವರಣದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಪರಿಸರ ಜಾಗೃತಿ ಜಾಥಾ ನಡೆಯಿತು. ಉಡುಪಿಯ ವಿವಿಧ ಶಾಲೆಗಳಿಂದ ಬಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. 


ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ , ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕರಾದ ಡಾ. ಅಶೋಕ್ ಕಾಮತ್ , ಜಿಲ್ಲಾ ಸತ್ರ  ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು, ಸ್ಕೌಟ್ಸ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ನಿರ್ದೇಶಕರು ಶೀ ಜಯಕರ ಶೆಟ್ಟಿ ಇಂದ್ರಾಳಿ , ಎಂ. ಐ. ಟಿ ಸಂಖ್ಯೆಯ ಸಿವಿಲ್ ವಿಭಾಗದ ಮುಖ್ಯಸ್ಥರಾದ ಪ್ರೊ . ಬಾಲಕೃಷ್ಣ ಮದ್ದೋಡಿ ಉಪಸ್ಥಿತರಿದ್ದರು. ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಿಕ್ಷಕರಾದ ಶ್ರೀ ಶಿವಪ್ರಸಾದ ಅಡಿಗ ರವರು ಕಾರ್ಯಕ್ರಮ ನಿರೂಪಿಸಿದರು. 






                ಜಿಲ್ಲಾಧಿಕಾರಿಯವರಿಂದ ಸ್ಮರಣಿಕೆ ಸ್ವೀಕಾರ


                ಪರಿಸರ ಜಾಥಾ ಕಾರ್ಯಕ್ರಮ

No comments:

Post a Comment

SSLC TIME TABLE _ 2023

TOPPER IN PUC EXAM RESULT

           KARNATAKA PUBLIC SCHOOL HIRIADKA                      🌟Congratulations🌟 ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿ...